ಕರ್ನಾಟಕ ಲೋಕಸೇವಾ ಆಯೋಗ ಈ ಕೆಳಕಂಡ ಉಳಿಕೆ ಮೂಲ ವೃಂದದ ಗ್ರೂಪ್ ‘ಸಿ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ
(KPSC Accounts Assistant Recruitment 2023 – Apply Online for 242 Posts)

ಕ್ರಮ ಸಂಖ್ಯೆ | ಇಲಾಖೆಯ ಹೆಸರು / ಹುದ್ದೆಯ ಪದನಾಮ | ಉಳಿಕೆ ಮೂಲ ವೃಂದ |
01 | ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಲೆಕ್ಕ ಸಹಾಯಕರು | 242 |
ವಿಶೇಷ ಸೂಚನೆ:-
1] ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು .
2] ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ,, ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಸುರಿಸಲಾಗುವುದು.
3] ನಿಯಮಾನುಸಾರ ಆನ್ ಲೈನ್ ಅರ್ಜಿಯೊಂದಿಗೆ ಸಲ್ಲಿಸುವ ಲಗತ್ತುಗಳ ಆಧಾರದ ಮೇಲೆ ಮಾತ್ರವೇ ದಾಖಲೆಗಳ ಪರಿಶೀಲನೆ ಮಾಡಲಾಗುವುದರಿಂದ ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ, ಮೀಸಲಾತಿ, ಪ್ರಮಾಣ ಪತ್ರ ಇತರ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನ್ನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯ ಅನುಬಂಧದಲ್ಲಿ, ಸೂಚಿಸಿರುವ ನಮೂನೆಗಳಲ್ಲಿಯೇ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು, ಆರ್ಜಿ ಸಲಿಸುವಾಗ ಅಪ್ಲೋಡ್ ಮಾಡತಕ್ಕದ್ದು. (ದಾಖಲೆಗಳು ಸುಸ್ಪಷ್ಟವಾಗಿರಬೇಕು) ತಪ್ಪಿದ್ದಲ್ಲಿ, ಅವರ ಮೀಸಲಾತಿ/ಅಭ್ಯರ್ಥಿತ್ವವನ್ನು ತರಸ್ಕರಿಸಲಾಗುವುದು.
4] ಅರ್ಜಿಯಲ್ಲಿ ಕೋರದೇ ತದನಂತರದಲ್ಲಿ ಮನವಿ ಮುಖಾಂತರ ಯಾವುದೇ ಮೀಸಲಾತಿಯನ್ನು ಕೋರಿದ್ದಲ್ಲಿ/ದಾಖಲೆಗಳನ್ನು ಸಲ್ಲಿಸಿದಲ್ಲಿ ಪರಿಗಣಿಸಲಾಗುವುದಿಲ್ಲ.
5] ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ / ಸಹಿ /ವಯೋಮಿತಿ /ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ಯಾವುದೇ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ (CSC) ಅಥವಾ ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಮೂಲಕ ಸಂದಾಯ ಮಾಡಬಹುದಾಗಿರುತ್ತದೆ, ಶುಲ್ಕವನ್ನು ಪಾವತಿಸಿದ ಹಾಗೂ ದಾಖಲೆಗಳನ್ನು / ಭಾವಚಿತ್ರ / ಸಹಿಯನ್ನು ಅಪ್ಲೋಡ್ ಮಾಡದೇ ಇರುವ / ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವದು. ಶುಲ್ಕವನ್ನು ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ (CSC) ಪಾವತಿಸಲು ಅವಕಾಶ ನೀಡಲಾಗಿರುವುದರಿಂದ ಅರ್ಜಿಗಳನ್ನು ಇಲ್ಲಿಯೂ ಸಹ ಸಲ್ಲಿಸಬಹುದಾಗಿದೆ.
ಶುಲ್ಕ :-
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ | ರೂ.600/- |
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ | ರೂ. 300/- |
ಮಾಜಿ ಸೈನಿಕ ಅಭ್ಯರ್ಥಿಗಳಿಗೆ | ರೂ. 50/- |
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ | ಶುಲ್ಕ ಪಾವತಿಯಿಂದ ವಿನಾಯಿತಿ ಇದೆ, |
ವಿಶೇಷ ಸೂಚನೆ:- ರ, 35/- ರ ಪ್ರಕ್ರಿಯೆ ಶುಲ್ಕ (processing fees)ವನ್ನು ಎಲ್ಲಾ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳು ಸೇರಿದಂತೆ) ಕಡ್ಡಾಯವಾಗಿ ಪಾವತಿಸತಕ್ಕದು, ಪಾವತಿಸದಿದ್ದಲ್ಲಿ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುವುದು. |
ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದು, ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂತಿರುಗಿಸಲಾಗುವುದಿಲ್ಲ ಅಥವಾ ಅದನ್ನು ಆಯೋಗವು ನಡೆಸುವ ಇತರೆ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ, ಶುಲ್ಕವನ್ನು ಸಂದಾಯ ಮಾಡದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಹತಾ ಪರತ್ತುಗಳು:-
ಅ) | ಭಾರತೀಯ ನಾಗರಿಕನಾಗಿರತಕ್ಕದ್ದು |
ಆ) | ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯಾರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿಯಿರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವದಿಲ್ಲ. |
ಇ) | ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು, |
ಈ) | ದೈಹಿಕವಾಗಿ ಅನರ್ಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುದಾಗಿ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ರಾಜ್ಯ ಸರ್ಕಾರವು ಕಾಯ್ದಿರಿಸಿಕೊಂಡಿದೆ ಮತ್ತು ಸರ್ಕಾರದ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ. |
ನಿಗದಿತ ಶೈಕ್ಷಣಿಕ ಅರ್ಹತೆಯ ಜೊತೆಗೆ ಈ ಮೇಲ್ಕಂಡ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.
ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ:-
ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.
ವಯೋಮಿತಿ:- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ, ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಟ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.
ಅನುಸೂಚಿ |
|
ಗ್ರೂಪ್ ‘ಸಿ’ ಹುದ್ದೆಗಳು |
|
ಹುದ್ದೆಗಳ ಅನುಕ್ರಮಸಂಖ್ಯೆ | 163-404 |
ಹುದ್ದೆಯ ಸಂಕೇತ / POST CODE | 1 |
ಇಲಾಖೆಯ ಹೆಸರು /ಹುದ್ದೆಯ ಪದನಾಮ / ಹುದ್ದೆಗಳ ಸಂಖ್ಯೆ | ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ 242 ಲೆಕ್ಕ, ಸಹಾಯಕರು |
ವೇತನ ಶ್ರೇಣಿ | ರೂ.27,650-52,650/- |
ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆ | Must posses B.Com or B.B.M or B.B.A Degree, or Posses any other equivalent qualification notified as such by U.G.C ಇಲಾಖೆಯ ಸ್ಪಷ್ಟೀಕರಣದಂತೆ ಈ ಕೆಳಕಂಡ ವಿದ್ಯಾರ್ಹತೆಗಳು ತತ್ಸಮಾನ (Equivalent) ವಿದ್ಯಾರ್ಹತೆಗಳಾಗಿರುತ್ತವೆ.
1. BBS/BBM/BBE Restructured as BBA or B.Com or B.Com (Hons) 2. BIBF be restructured as BBA or B.Com (International Business & Finance) |
ವಯೋಮಿತಿ, ವಯಸ್ಸು ವರ್ಷಗಳಲ್ಲಿ
|
ಕನಿಷ್ಠ – 18 ವರ್ಷ
ಗರಿಷ್ಠ – ಸಾಮಾನ್ಯ ಅರ್ಹತೆ-35 ವರ್ಷಗಳು, ಪ್ರವರ್ಗ2(ಎ), 2(ಬಿ), 3(ಎ), 3(ಬಿ)-38 ವರ್ಷಗಳು ಪ್ರಜಾ/ಪ್ರ.ಪಂ / ಪ್ರವರ್ಗ 1 – 40 ವರ್ಷಗಳು |
ಸ್ವೀಕೃತಿ ಕಾಲಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ರ್ಪಾರಂಭಿಕ ದಿನಾಂಕ | 23-03-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23-04-2023 |
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ | 24-04-2023 |
ಪ್ರಮುಖ ಲಿಂಕ್ಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿದಾರರಿಗೆ ಸೂಚನೆಗಳು :
- ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಜಾಹೀರಾತಿನಲ್ಲಿ ಸೂಚಿಸಲಾದ ಕನಿಷ್ಠ ಅಗತ್ಯ ವಿದ್ಯಾರ್ಹತೆ, ವಯಸ್ಸು, ವೃತ್ತಿ ಅರ್ಹತೆ, ಅನುಭವದ ಮಾನದಂಡಗಳು ಇತ್ಯಾದಿಗಳನ್ನು ಎಚ್ಚರಿಕೆಯಿಂದ ಓದಬೇಕು. ಆನ್ಲೈನ್ ಅರ್ಜಿಯಲ್ಲಿ ಅಭ್ಯರ್ಥಿಯು ಸಲ್ಲಿಸಿದ ದತ್ತಾಂಶ ಆಧಾರದ ಮೇಲೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಲಾಗುವುದರಿಂದ, ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ಸ್ಥಾನಕ್ಕೆ ಅರ್ಹತೆ ಹೊಂದಿರಬೇಕು.
- ಅರ್ಜಿದಾರರು ಆನ್ಲೈನ್ನಲ್ಲಿ ಮಾಹಿತಿಯನ್ನು ಸಲ್ಲಿಸುವಾಗ ಅಗತ್ಯ ಎಚ್ಚರ ವಹಿಸಬೇಕು. ಆನ್ಲೈನ್ನಲ್ಲಿ ಒಮ್ಮೆ ಸಲ್ಲಿಸಿದ ಅರ್ಜಿಯನ್ನು ಯಾವುದೇ ಸಂದರ್ಭದಲ್ಲೂ ಬದಲಾಯಿಸಲಾಗುವುದಿಲ್ಲ ಮತ್ತೆ ಸಲ್ಲಿಸಲಾಗುವುದಿಲ್ಲ. ಇದಲ್ಲದೆ, ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ ಅಭ್ಯರ್ಥಿಯು ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿಯಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ. ಆದ್ದರಿಂದ, ನೀವು ಆನ್ಲೈನ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ಪ್ರಾರಂಭಿಸುವ ಮೊದಲು ದಯವಿಟ್ಟು ಎಲ್ಲಾ ದತ್ತಾಂಶ/ ವಿವರಗಳನ್ನು ಎಚ್ಚರಿಕೆಯಿಂದ ಓದಬೇಕು.
- ಆನ್ಲೈನ್ ಅರ್ಜಿಯ ಅಂತಿಮ ಸಲ್ಲಿಕೆಗೆ ಮೊದಲು, ಅಭ್ಯರ್ಥಿಯು ಅವನ/ಅವಳ ಸರಿಯಾಗಿ ಭರ್ತಿ ಮಾಡಿದ ಅರ್ಜಿಯನ್ನು ಪೂರ್ವವೀಕ್ಷಿಸಲು (preview) ಸಾಧ್ಯವಾಗುತ್ತದೆ. ಅಭ್ಯರ್ಥಿಯು ಅವನ/ಅವಳ ದಾಖಲೆಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಮುದ್ರಿಸಿಟ್ಟುಕೊಳ್ಳುವಂತೆ ಸೂಚಿಸಲಾಗಿ
- ಅಭ್ಯರ್ಥಿಗಳು ತಮ್ಮ ಅರ್ಜಿಯ ಪ್ರತಿ ಹಾಗೂ ಅರ್ಜಿ ಸಂಖ್ಯೆಯನ್ನು ಜಾಗರೂಕತೆಯಿಂದ ಇಟ್ಟುಕೊಳ್ಳತಕ್ಕದ್ದು. ವೆಬ್ಸೈಟ್ನಲ್ಲಿ ಒದಗಿಸಲಾಗುವ ಲಿಂಕ್ನಿ0ದ ಸೂಚನಾ ಪತ್ರಕ್ಕಾಗಿ ಮತ್ತು ಸಂದರ್ಶನಕ್ಕೆ ಅರ್ಹತೆ ಕುರಿತಂತೆ ಇತರೆ ಯಾವುದೇ ಮಾಹಿತಿಗಾಗಿ, ಜಾಲತಾಣಕ್ಕೆ ಭೇಟಿನೀಡತಕ್ಕದು
- ಆನ್ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಇಮೇಲ್ – ID ಹಾಗೂ ಮೊಬೈಲ್ ಸಂಖ್ಯೆಗೆ ಅರ್ಹ ಅಭ್ಯರ್ಥಿಗಳಿಗೆ SMS/ಇಮೇಲ್ ಮುಖಾಂತರ ಮಾಹಿತಿಯನ್ನು ರವಾನಿಸಲಾಗುತ್ತದೆ.
- ಫೋಟೋ ಮತ್ತು ಸಹಿಯನ್ನು/ದಾಖಲೆಗಳನ್ನು ಅಪ್ಲೋಡ್ ಮಾಡದೇ ಇರುವ ಅಪೂರ್ಣವಾಗಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಹಾಗೂ ಸಂದಾಯ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ಅಭ್ಯರ್ಥಿಗಳು ತಮ್ಮ ಮಾಹಿತಿಗಾಗಿ ಭರ್ತಿ ಮಾಡಿ ಸಲ್ಲಿಸಿದ ಅರ್ಜಿಯ ಒಂದು ಫೋಟೋ ಪ್ರತಿಯನ್ನು ಕಡ್ಡಾಯವಾಗಿ ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ. ಆಯೋಗದಿಂದ ಯಾವುದೇ ಕಾರಣಕ್ಕೂ ಅರ್ಜಿಯ ಪ್ರತಿಯನ್ನು ಒದಗಿಸಲಾಗುವುದಿಲ್ಲ
- ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವುದಿಲ್ಲ.
- ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂತಿರುಗಿಸಲಾಗುವುದಿಲ್ಲ.
- ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳಲು ಹಾಗೂ ಈ ಬಗ್ಗೆ ಮಾಹಿತಿಯನ್ನು ಆಯೋಗದ ವೆಬ್ ಸೈಟ್ ನಲ್ಲಿಯೂ ಬಿತ್ತರಿಸಲಾಗುವುದು. ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗತಕ್ಕದ್ದು.
- ಹುದ್ದೆಗಳಿಗೆ ನಿಗದಿಪಡಿಸಿರುವ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ, ಇತ್ಯಾದಿಗಳಿಗನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ತಪ್ಪು ಮಾಹಿತಿ ನೀಡಿದಲ್ಲಿ, ಅಂತಹ ಅಭ್ಯರ್ಥಿಗಳನ್ನು ಆಯೋಗವು ತಿರಸ್ಕರಿಸಲಾಗುವುದು. ಆದುದರಿಂದ, ಅರ್ಜಿ ಸಲ್ಲಿಸುವ ಮುನ್ನ ಅವರು ನೀಡಿರುವ ಎಲ್ಲಾ ಮಾಹಿತಿಯು ಸರಿಯಾಗಿದೆ ಎಂದು ಖಚಿತಪಡಿಸಿಕೊಂಡು ದೃಢೀಕರಣ ನೀಡುವಾಗ ಎಚ್ಚರ ವಹಿಸಬೇಕು.